Add parallel Print Page Options

ನಂಬಿಕೆಯ ಶಕ್ತಿ

(ಮತ್ತಾಯ 21:20-22)

20 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು. 21 ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.

22 ಯೇಸು, “ದೇವರಲ್ಲಿ ನಂಬಿಕೆ ಇಡಿರಿ. 23 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ. 24 ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.

Read full chapter